ಅಂಗಡಿ ಮತ್ತು ವಾಣಿಜೋದ್ಯಮ ಸಂಸ್ಥೆಗಳಿಗೆ ಇರುವ ನಿಯಮ ೨೪ರ ಪ್ರಕಾರ ಎಲ್ಲಾ ವಾಣಿಜ್ಯ ಮತ್ತು ವ್ಯವಹಾರ ಸಂಸ್ಥೆಗಳ ನಾಮಫಲಕಗಳಲ್ಲಿ ಕನ್ನಡಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ನಿಯಮ ಉಲ್ಲಂಘಿಸಿ ತಪ್ಪಿತಸ್ಥರೆಂದು ತೀರ್ಮಾನವಾದಾಗ ಅಂತಹವರಿಗೆ 10,000 ರೂಪಾಯಿಗಳವರೆಗೂ ದಂಡ ಹಾಕಬಹುದಾಗಿದೆ. ಆದರೆ ನಮ್ಮ ನಾಡಿನ ರಾಜಕೀಯ ನಾಯಕರ ಇಚ್ಚಾ ಶಕ್ತಿಯ ಕೊರತೆಯಿಂದಾಗಿ ನಿಯಮವಿದ್ದರೂ ನಿಯಮ ಪೂರ್ಣ ಪ್ರಮಾಣದಲ್ಲಿ ಜಾರಿಗೆ ಬಂದಿಲ್ಲ. ನಿಯಮದ ಪೂರ್ಣ ಪ್ರಮಾಣದ ಜಾರಿಗೆ ಒತ್ತಾಯಿಸಿ ನಿರಂತರವಾಗಿ ಹೋರಾಟ ನಡೆಸುತ್ತಾ ಬಂದಿದ್ದೇವೆ. ಇದೇ ನಿಟ್ಟಿನಲ್ಲಿ ೧೬-ನವೆಂಬರ್-೨೦೧೦ ರಂದು ಬೆಂಗಳೂರು ನಗರ ಪಾಲಿಕೆ ಕಛೇರಿಯ ಎದುರು ಪ್ರತಿಭಟನೆ ನಡೆಸಿ, ನಿಯಮವನ್ನು ಜಾರಿಗೆ ತರಬೇಕೆಂದು ಮತ್ತು ನಿಯಮವನ್ನು ಮೀರಿದವರ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದೇವೆ.