Karnataka Rashana Vedike
Kuvempu
Sangatane.jpg
ico_adhyaksharalEkhaniyinda3.jpg
kvrblog.jpg

ಹಿಂದಿ ದಿವಸ/ಸಪ್ತಾಹ ದ ವಿರುದ್ಧ ಪ್ರತಿಭಟನೆ

ಕ.ರ.ವೇ ಹೋರಾಟಗಳು
ಪ್ರತಿವರ್ಷ ಸೆಪ್ಟೆಂಬರ್ ೧೪ರಂದು ಭಾರತದಾದ್ಯಂತ ಕೇಂದ್ರಸರ್ಕಾರಿ ಕಛೇರಿಗಳಲ್ಲಿ "ಹಿಂದೀ ದಿವಸ್" "ಹಿಂದೀ ಸಪ್ತಾಹ್" "ಹಿಂದೀ ಪಕ್ಷ"ಗಳನ್ನುಹೆಚ್ಚಿಸುವ, ಹಿಂದೀ ಪ್ರಚಾರ ಕಾರ್ಯದಲ್ಲಿ ನಿರತವಾಗಿದೆ. ಈ ಎಲ್ಲ ಆಚರಣೆಗಳನ್ನು ಸಾರ್ವಜನಿಕರ ತೆರಿಗೆ ಹಣ ಬಳಸಿ ಭಾರತ ಸರ್ಕಾರ ಆಚರಿಸುತ್ತಿದೆ. ಈ ಮೂಲಕ ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿಯ ಬಳಕೆಯನ್ನು ನಿರಂತರವಾಗಿ ಹೆಚ್ಚಿಸಲು ಯೋಜನೆಗಳನ್ನು ಹಾಕಿಕೊಂಡು ಹೆಜ್ಜೆಹೆಜ್ಜೆಯಾಗಿ ಜಾರಿಮಾಡುತ್ತಿದೆ. ಇದರಿಂದಾಗಿ ಕನ್ನಡಿಗರ ಶಿಕ್ಷಣ, ಉದ್ಯೋಗ, ವ್ಯಾಪಾರ ವಹಿವಾಟುಗಳಲ್ಲಿ ಹಿಂದೀ ಹೇರಿಕೆ ನಡೆಯುತ್ತಿದೆ.

ಕರ್ನಾಟಕ ರಕ್ಷಣಾ ವೇದಿಕೆಯು, ಕೇಂದ್ರಸರ್ಕಾರದ ಈ ದೋಷಪೂರಿತವಾದ ಭಾಷಾನೀತಿಯನ್ನೂ, ಅದರಿಂದಾಗುತ್ತಿರುವ ಹಿಂದೀ ಹೇರಿಕೆಯನ್ನೂ ತೀವ್ರವಾಗಿ ಖಂಡಿಸುತ್ತದೆ. ಈ ನಿಟ್ಟಿನಲ್ಲಿ ಕರ್ನಾಟಕದಾದ್ಯಂತ ಸೆಪ್ಟೆಂಬರ್ ೧೪ನ್ನು ಹಿಂದೀ ಹೇರಿಕೆ ವಿರೋಧಿ ದಿನವನ್ನಾಗಿ ಆಚರಿಸಲಾಗುತ್ತಿದೆ. ಈ ವರ್ಷವೂ ರಾಜ್ಯದ ನಾನಾ ಜಿಲ್ಲಾ ಕೇಂದ್ರಗಳಲ್ಲಿ ಕೇಂದ್ರಸರ್ಕಾರದ ಹಿಂದೀಭಾಷೆಯ ಪರವಾದ ನಿಲುವುಗಳ ವಿರುದ್ಧ ಪ್ರತಿಭಟನೆ ನಡಸಲಾಯಿತು. ಬೆಂಗಳೂರಿನಲ್ಲಿ ಮಾನ್ಯ ರಾಜ್ಯಪಾಲರನ್ನು ಕಂಡು ಹಿಂದೀ ಹೇರಿಕೆಯ ದುಷ್ಪರಿಣಾಮಗಳನ್ನು ವಿವರಿಸಿ ಕನ್ನಡಿಗರ ಪ್ರತಿರೋಧ ವ್ಯಕ್ತಪಡಿಸುವ ಆಗ್ರಹಪೂರ್ವಕವಾದ ಮನವಿಯನ್ನು ಸಲ್ಲಿಸಲಾಯಿತು.
ರಾಜ್ಯಪಾಲರಿಗೆ ನೀಡಿದ ಮನವಿ ಪತ್ರವನ್ನು ನೋಡಿ-

hindi herike2010-1.jpg

Hindi herike2010-2.jpg

 

hindi herike2010-3.jpg 

 

 ಪ್ರತಿಭಟನೆಯ ಪತ್ರಿಕಾ ವರದಿಯನ್ನು ಇಲ್ಲಿ ನೋಡಿ

 

 

 

ಕ.ರ.ವೇ ಹೋರಾಟಗಳು - ವಿಭಾಗದ ಇತರ ಅಂಕಣಗಳು

ನಿಮ್ಮ ಸ್ನೇಹಿತನಿಗೆ ಈ ಅಂಕಣ ಕಳಿಸಿ
 
ಪ್ರಕಟಣೆಗಳಿಗೆ ನೋಂದಾಯಿಸಿಕೊಳ್ಳಿ