Karnataka Rashana Vedike
Kuvempu
Sangatane.jpg
ico_adhyaksharalEkhaniyinda3.jpg
kvrblog.jpg

ಬಿಜೆಪಿ ಮತ್ತು ನಾಡ ವಿರೋಧಿ ಎಂಇಎಸ್ ಹೊಂದಾಣಿಕೆಗೆ ವಿರೋಧ

ಕ.ರ.ವೇ ಹೋರಾಟಗಳು

ನಾಡದ್ರೋಹಿ ಎಂಇಎಸ್ ಕನ್ನಡ-ಕನ್ನಡಿಗ-ಕರ್ನಾಟಕ ವಿರೋಧಿ ನಿಲುವಿನಿಂದ ಬೆಳಗಾವಿಯಲ್ಲಿ ಪುಂಡಾಟಿಕೆಯನ್ನು ನಡೆಸುತ್ತಿರುವುದು ಎಲ್ಲರಿಗೂ ತಿಳಿದಿದೆ. ಇತ್ತೀಚಿನ ದಿನಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿಯಲ್ಲಿ ನಡೆಸುತ್ತಿರುವ ಹೋರಾಟಗಳ ಪರಿಣಾಮವಾಗಿ ಎಂಇಎಸ್ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುವ ಸ್ಥಿತಿಯನ್ನು ತಲುಪಿದೆ.

ಆದರೆ ಬಿಜೆಪಿಯು ಅಧಿಕಾರದ ದುರಾಸೆಯಿಂದ ಎಂಇಎಸ್ ನ ಜೊತೆ ತಾಲೂಕು ಪಂಚಾಯತಿಯಲ್ಲಿ ಹೊಂದಾಣಿಕೆ ಮಾಡಿಕೊಳ್ಳಲು ಹೊರಟು, ಅಸ್ತಿತ್ವ ಕಳೆದು ಕೊಳ್ಳುತ್ತಿರುವ ಎಂಇಎಸ್ ಗೆ ಮರುಜೀವ ನೀಡಲು ಹೊರಟಿದೆ. ಇದು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯ ಕನ್ನಡ-ಕನ್ನಡಿಗ-ಕರ್ನಾಟಕದ ವಿರೋಧಿ ನಡೆಯಾಗಿದೆ. ಬಿಜೆಪಿ ಯ ಈ ನಡೆಯನ್ನು ನಮ್ಮ ವೇದಿಕೆಯು ವಿರೋಧಿಸುತ್ತದೆ ಮತ್ತು ಇದರ ವಿರುದ್ಧ ಬೆಳಗಾವಿಯಲ್ಲಿ ನಮ್ಮ ವೇದಿಕೆಯ ಘಟಕದಿಂದ ಪ್ರತಿಭಟನಾ ಜಾಥಾ ನಡೆಸಲಾಯಿತು.

ಇದರ ಪತ್ರಿಕಾ ವರದಿಯನ್ನು ಇಲ್ಲಿ ನೋಡಿ-

http://karave.blogspot.com/2011/01/bjp-mes_06.html

 

ಕ.ರ.ವೇ ಹೋರಾಟಗಳು - ವಿಭಾಗದ ಇತರ ಅಂಕಣಗಳು

ನಿಮ್ಮ ಸ್ನೇಹಿತನಿಗೆ ಈ ಅಂಕಣ ಕಳಿಸಿ
 
ಪ್ರಕಟಣೆಗಳಿಗೆ ನೋಂದಾಯಿಸಿಕೊಳ್ಳಿ